Site icon Suddi Belthangady

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ಮಾ.27ರಂದು ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್‌ ಶಾಸಕ ಕೆ.ಹರೀಶ್ ಕುಮಾರ್ ನೇರವೇರಿಸಿ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನ್ನು ಹಗಲಿರುಳು ದುಡಿದು ಗೆಲ್ಲಿಸುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಿದೆ.ಇನ್ನೊಮ್ಮೆ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಇರಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಸದೃಡವಾಗಿದ್ದು ಜಿ.ಎಸ್.ಟಿ ಕಟ್ಟುವುದರಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಕಾರ್ಯಕರ್ತರಲ್ಲಿ ಏನಾದರೂ ಭಿನ್ನಾಭಿಪ್ರಾಯವಿದ್ದರೇ ಭಿನ್ನಾಭಿಪ್ರಾಯಕ್ಕೂ ಪಕ್ಷಕ್ಕೂ ಯಾವುದೇ ಸಂಭಂಧವಿಲ್ಲ.ಪಕ್ಷ ಬೇರೆ, ಭಿನ್ನಾಭಿಪ್ರಾಯ ಬೇರೆ ಎಂದರು.ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆರ್ ಮಾತನಾಡಿ ಕಳೆದ 33 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರಿಲ್ಲದ ಹಸಿವನ್ನು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಸಂಕಲ್ಪ ಮಾಡಬೇಕಿದೆ.ಮತ್ತೊಮ್ಮೆ ಸಾಮರಸ್ಯದ ಗತವೈಭವನ್ನು ಸ್ಥಾಪಿಸುವ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಚುನಾವಣಾ ಉಸ್ತುವಾರಿ ರಕ್ಷಿತ್ ಶಿವರಾಮ್‌ ವಹಿಸಿದ್ದರು.

ವೇದಿಕೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಚಿವ ಗಂಗಾಧರ ಗೌಡ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ, ಕೆಪಿಸಿಸಿ ಸದಸ್ಯ ರಾಜ್ ಶೇಖ‌ರ್ ಅಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ, ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್‌, ಕೆಡಿಪಿ ಸದಸ್ಯ ಸಂತೋಷ್ ಕುಮಾ‌ರ್, ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾ‌ರ್, ಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಶೇಖ‌ರ್ ಕುಕ್ಕೇಡಿ, ಮಹಿಳಾ ಘಟಕದ ಅಧ್ಯಕ್ಷರಾದ ಲೋಕೇಶ್ವರಿ ವಿನಯಚ್ಚಂದ್ರ, ನಮಿತಾ, ವಂದನಾ ಭಂಡಾರಿ, ಇಸ್ಮಾಯಿಲ್ ಪೆರಿಂಜೆ, ಚಾರ್ಮಾಡಿ ಹಸನಬ್ಬ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಮಾಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಸೆಲೆಸ್ಟಿನ್‌ ಡಿಸೋಜಾ, ಪಡಂಗಡಿ ಗ್ರಾ.ಪಂ ಸದಸ್ಯೆ ಕವಿತಾ ಮೋನಿಸ್ ಹಾಗೂ ಹೃಷಿಕೇಶ್‌ ಜೈನ್, ಮುನೀರ್ ಸೇರ್ಪಡೆಗೊಂಡರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್‌ ಬಂಗೇರ ಕಾಶಿಪಟ್ಟ ಸ್ವಾಗತಿಸಿದರು.

Exit mobile version