ಬೆಳ್ತಂಗಡಿ: ಮೂಡುಕೋಡಿಯಲ್ಲಿ ಅಕ್ರಮ ಮದ್ಯ ಮಾರಾಟಮಾಡುತ್ತಿದ್ದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಮೂಡುಕೋಡಿ ಗ್ರಾಮದ ನಿವಾಸಿ ಶೇಖರ ಶೆಟ್ಟಿ ಎಂಬವರು ಮೂಡುಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಮದ್ಯದ ಬಾಟ್ಲಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಥಳದಿಂದ 1469ರೂ ಮೌಲ್ಯದ 3.690 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.