ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.
ಮುಂಬೈನ ಜಾನ್ ಡಿ ಸಿಲ್ವ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಸಮುದ್ರದಲ್ಲಿ ಕಚ್ಚಾ ತೈಲವನ್ನು ತೆಗೆಯುವ ಪ್ರಕ್ರಿಯೆ ಹಾಗೂ ಸದರಿ ಉದ್ಯಮದಲ್ಲಿ ದೊರೆಯುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ಸವಿವರವಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ.ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು. ವಿಭಾಗ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಕೆ ಹಾಗೂ ಕಾರ್ಯಕ್ರಮ ಆಯೋಜಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶದ ಸಂಯೋಜಕರಾದ ಡಾ. ಕುಶಲಪ್ಪ ಹಾಗೂ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಏನ್ ಉಪಸ್ಥಿತರಿದ್ದರು.
ಪ್ರೊಫೆಸರ್ ನವೀನ್ ಹಾಗೂ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್ ಕಾರ್ಯಕ್ರಮವನ್ನು ಸಂಯೋಜಿಸಿದರು.ಸಂಜನಾ ಸ್ವಾಗತಿಸಿ, ವಿಜಯಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು. ಅಬಿಷ ವಂದನಾರ್ಪಣೆ ಮಾಡಿದರು.ಅಪೇಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು.