ಮಾಲಾಡಿ ಐ ಟಿ ಐ ಕಾಲೇಜಿನಲ್ಲಿ ವಿಧಾನ ಸಭಾ ಕ್ಷೇತ್ರ-200ರಲ್ಲಿ ಸ್ವೀಪ್ ಕಾರ್ಯಕ್ರಮ

0

ಬೆಳ್ತಂಗಡಿ: ಸರ್ಕಾರಿ ಐಟಿಐ ಕಾಲೇಜು ಮಾಲಾಡಿಯಲ್ಲಿ ಮಾ.27ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ 2024 ಲೋಕ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ , ಕಾಲೇಜಿನ ಪ್ರಾಂಶುಪಾಲ ರಮೇಶ್ , ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್, ತಾ.ಪಂ.ಅಧೀಕ್ಷಕ ಡಿ. ಪ್ರಶಾಂತ್, ಮಾಲಾಡಿ ಗ್ರಾ.ಪಂ ಕಾರ್ಯದರ್ಶಿ ಯಶೋಧರ ಶೆಟ್ಟಿ ಹಾಗೂ ನರೆಗಾ ಯೋಜನೆಯ ಐಇಸಿ ಸಂಯೋಜಕಿ ವಿನಿಷ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಚುನಾವಣಾ ಹಬ್ಬದಲ್ಲಿ ಯುವ ಮತದಾರರು ತಮ್ಮ ತಮ್ಮ ಕುಟುಂಬದ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಂಡು ತಪ್ಪದೇ ಮತದಾನದಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ತಾಲೂಕು ಮತ್ತು ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರು ಪ್ರಮುಖ ಪಾತ್ರ ವಹಿಸಬೇಕೆಂದು ಜಿಲ್ಲಾ ಮಟ್ಟದ ಸ್ವೀಪ್ ತರಬೇತುದಾರ ಯೋಗೇಶ ಹೆಚ್.ಆರ್ ವಿದ್ಯಾರ್ಥಿಗಳೊಂದಿಗೆ ಸಂವಾದಿಸಿ ಎಲ್ಲರ ಸಹಕಾರ ಕೋರಿದರು.

p>

LEAVE A REPLY

Please enter your comment!
Please enter your name here