ಮಾಲಾಡಿ ನಿವಾಸಿ ಅಮ್ಮಾಡಿ ಗ್ರಾ.ಪಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ- ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು

0

ಮಡಂತ್ಯಾರು : ಮಾಲಾಡಿ ಗ್ರಾಮದ ವಿದ್ಯಾ ನಗರ ನಿವಾಸಿ ಅಮ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಕೆ (52ವ) ಎಂಬವರು, ನಾಪತ್ತೆಯಾಗಿರುವುದಾಗಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಸದ್ರಿಯವರ ಸಹೋದರ ರಮೇಶ್ ಎಂಬವರು ನೀಡಿದ ದೂರಿನಲ್ಲಿ ಸುಮಾರು 6 ವರ್ಷಗಳಿಂದ ಅಮ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿರುವ ಲಕ್ಷ್ಮೀನಾರಾಯಣ ಅವರು ಮಾ. 27 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ತನ್ನ ಪತ್ನಿಗೆ ತಿಳಿಸಿ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ, ಈ ಬಗ್ಗೆ ವಿಷಯ ತಿಳಿದ ಅಮ್ಮಾಡಿ ಪಂಚಾಯತ್ ನಲ್ಲಿ ವಿಚಾರಿಸಿದಾಗ, ಸದ್ರಿಯವರು ಮಧ್ಯಾಹ್ನದವರೆಗೆ ಕರ್ತವ್ಯ ನಿರ್ವಹಿಸಿ ಹೋಗಿರುವುದಾಗಿ ತಿಳಿಸಿರುತ್ತಾರೆ.

ಆದರೆ ಲಕ್ಷ್ಮೀನಾರಾಯಣ ಕೆ ರವರು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ23/2024ರಂತೆ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here