ಕುಂಡದಬೆಟ್ಟು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

0

ಗರ್ಡಾಡಿ: ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ.29 ರಂದು ಸಂಭವಿಸಿದೆ.

ವೇಣೂರು ಕಡೆಯಿಂದ ಗುರುವಾಯನಕೆರೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ತಗುಲಿ ಚರಂಡಿಗೆ ಬಿದ್ದೆದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿದೆ.

ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಲೈನ್ ಚಾರ್ಜ್ ಇತ್ತು. ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ.

ಮಡಂತ್ಯಾರು ಮೂಲದ ಕಾರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here