Site icon Suddi Belthangady

ಉಜಿರೆ: ಡಾ.ಬಿ.ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

ಉಜಿರೆ: ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ, ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾಗಿದ್ದ ಡಾ.ಬಿ.ಯಶೋವರ್ಮ ಅವರ ಸ್ಮರಣಾರ್ಥ ಮಾ.30 ರಂದು “ಯಶೋವನ” ಲೋಕಾರ್ಪಣೆಗೊಂಡಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎಸ್‌.ಡಿ.ಎಂ ಕಾಲೇಜಿನ ಆರ್ಬೋರೇಟಂ- ಅಂದರೆ ಸಸ್ಕೋಧ್ಯಾನವನ್ನು “ಯಶೋವನ” ಎಂದು ಮರುನಾಮಕರಣಗೊಳಿಸಲಾಗಿದೆ.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್‌ ಆಳ್ವ ಅವರು “ಯಶೋವನ” ಅನಾವರಣಗೊಳಿಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದಲ್ಲಿ ಡಾ.ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಮಂಗಳೂರು ವಿ.ವಿ.ಯ ಪಿ.ಎಲ್ ಧರ್ಮ, ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಸುರ್ಯಗುತ್ತು, ಸೋನಿಯಾ ಯಶೋವರ್ಮ, ಪೂರಣ್ ವರ್ಮ ಮೊದಲಾದವರು ಉಪಸ್ಥಿತರಿದ್ದರು.

ಉಜಿರೆ ಕಾಲೇಜು ಪ್ರಾಚಾರ್ಯ ಡಾ.ಕುಮಾರ ಹೆಗ್ಡೆ ಸ್ವಾಗತಿಸಿದರು, ಡಾ.ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಡಾ.ಹೆಗ್ಗಡೆಯವರ ಆಶಯದಂತೆ “ಯಶೋವನ”ದಲ್ಲಿ ಬಾಲಿಯ ಲಿಂಪುಯಂಗ್ ದೇವಾಲಯದ ಆವರಣದಲ್ಲಿರುವ ವಿಶ್ವ ವಿಖ್ಯಾತ “ಗೇಟ್ ಆಫ್ ಹೆವನ್” ಅಂದರೆ “ಸ್ವರ್ಗದ ದ್ವಾರ”ದ ಮಾದರಿಯ ಗೋಪುರವನ್ನು ನಿರ್ಮಿಸಲಾಗಿದೆ. ಆ ಮೂಲಕ ಸ್ವರ್ಗಸದೃಶ ಪ್ರಕೃತಿಯ ಲೋಕಕ್ಕೆ ಎಲ್ಲರಿಗೂ ಸ್ವಾಗತ ಕೋರುವಂತೆ ಮಾಡಲಾಗಿದೆ.

ಏನಿದು ಯಶೋವನ:1999 ರಲ್ಲಿ ಡಾ.ಬಿ.ಯಶೋವರ್ಮ ಅವರ ಮುತುವರ್ಜಿಯಿಂದ ಆರಂಭವಾದ ಅಪರೂಪದ ಸಸ್ಯಸೌರಭಗಳನ್ನು ರಕ್ಷಿಸುವ ಸಸ್ಕೋಧ್ಯಾನವೇ ಈ ಯಶೋವನ.

ಪಶ್ಚಿಮಘಟ್ಟಗಳ ಅಪರೂಪದ ಸಸ್ಯ ಸಂಕುಲಗಳನ್ನು ಸಂರಕ್ಷಿಸುವ ಮತ್ತು ಅವುಗಳ ತಳಿಗಳನ್ನು ದಾಖಲಿಸುವ ಸಲುವಾಗಿ ಉಜಿರೆಯ ಸಿದ್ಧವನ ಸಮೀಪದಲ್ಲಿ ಎಂಟು ಎಕರೆ ಜಾಗದಲ್ಲಿ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಆರ್ಬೋರೇಟಂ (ಸಸ್ಕೋದ್ಯಾನ) ಹೆಸರಿನಲ್ಲಿ ಈ ಸಂರಕ್ಷಣಾ ವನವನ್ನು ಸ್ಥಾಪಿಸಿತ್ತು.

Exit mobile version