ವೇಣೂರಿನಲ್ಲಿ ಅಕ್ರಮವಾಗಿ ಗೋ ಸಾಗಾಟ: ಆರೋಪಿಗಳ ಬಂಧನ

0

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು, ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದುಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here