ಅಕ್ರಮ ಗೋಸಾಗಾಟ, ಕಾರು ಡಿಕ್ಕಿ ಒರ್ವ ಸಾವು- ರಸ್ತೆ ತಡೆದು ಪ್ರತಿಭಟನೆ- ಹರೀಶ್ ಪೂಂಜ ಭಾಗಿ

0

ಬೆಳ್ತಂಗಡಿ : ಅಕ್ರಮ ಗೋಸಾಗಾಟ, ಕಾರು ಡಿಕ್ಕಿ ಒರ್ವ ಸಾವು ,ರಸ್ತೆ ತಡೆದು ಪ್ರತಿಭಟನೆ ಹರೀಶ್ ಪೂಂಜಾ ಭಾಗಿ.ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ನಡೆದಿದ್ದು, ಡಿಕ್ಕೆ ಹೊಡೆದ ವಾಹನ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ.ದನ‌ ಸಾಗಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತಿಭನೆ ನಡೆಸಲಾಗಿದೆ.

ಉದ್ವಗ್ನ ವಾತಾವರಣ ನಿರ್ಮಾಣ ಆಗಿತ್ತು.ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ವ್ಯಕ್ತಿ. ವಿಠಲ ರೈ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಸಾಗಿದೆ.ಬಳಿಕ ಕಾರು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ.ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ಪತ್ತೆಯಾಗಿದೆ. ಚಾಲಕ ಪರಾರಿಯಾಗಿದ್ದಾನೆ.

ಆರೋಪಿಗಳನ್ನು ಬಂಧಿಸದೆ ಈ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಕೂಡಲೇ ಅರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಹರೀಶ್ ಪೂಂಜಾ , ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.ಯಾರದೇ ಒತ್ತಡ ವಿದ್ದರೂ ಕಾನೂನು ಪ್ರಕಾರ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ಬಿಜೆಪಿಯ ಹಲವು ಮುಖಂಡರು, ಕಾರ್ಯಕರ್ತರು ಆಗಮಿಸಿ ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ವಿಚಾರವಾಗಿ ಹಿಂದೂಪರ ಸಂಘಟನೆಯವರು ಕಡಬದ ರಾಜ್ಯ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ಶಾಸಕರು ಆಗಮಿಸಿ ಅವರಿಗೆ ಬೆಂಬಲ ಸೂಚಿಸಿ ಈ ವಿಚಾರ ಹೇಳಿದರು.

p>

LEAVE A REPLY

Please enter your comment!
Please enter your name here