ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಂಘದ ಮಹಾಸಭೆ ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಶೇಖ್ ಲತೀಫ್‌ರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾಸಭೆಯಲ್ಲಿ ಸಂಘದ ಮುಂದಿನ ಅವಧಿಗೆ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಂಘದ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಹಾಗೂ ಪ್ರದಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಸರ್ವಾನುಮತದಿಂದ ಆಯ್ಕೆಯಾದರು.
ನೂತನ ಆಡಳಿತ ಮಂಡಳಿಗೆ ಇತರ ಪದಾಧಿಕಾರಿಗಳನ್ನೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
p>