ಬೆಳ್ತಂಗಡಿ: ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.ಈ ನಿಟ್ಟಿನಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.1ರಂದು ಕ್ರೀಡಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.
ಶಾಲಾ ಸಂಚಾಲಕ ವಂ.ವೋಲ್ಟರ್ ಡಿಮೆಲ್ಲೋರವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಕಲಿಕೆಯ ಜೊತೆಯಲ್ಲಿ ಮಕ್ಕಳು ಆಟಗಳಲ್ಲಿ ಅಭಿರುಚಿ ಬೆಳೆಸಿಕೊಳ್ಳಬೇಕು.
ಪ್ರತಿಯೊಂದು ಆಟವನ್ನು ನಿಯಮಾನುಸಾರ ಅಭ್ಯಾಸ ಮಾಡಲು ಇಂತಹ ಕ್ರೀಡಾ ಶಿಬಿರಗಳು ಸಹಕಾರಿಯಾಗುತ್ತದೆ ಎಂದು ನುಡಿದು ಶುಭ ಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ವಂ.ಕ್ಲಿಫರ್ಡ್ ಪಿಂಟೋರವರು ಶಿಬಿರದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿ ಶುಭ ಹಾರೈಸಿದರು.
ಶಿಬಿರದಲ್ಲಿ ಒಟ್ಟು 150 ವಿದ್ಯಾರ್ಥಿಗಳು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಡಿ’ಸೋಜ ಉಪಸ್ಥಿತರಿದ್ದರು.
ಕಬಡ್ಡಿ ಆಟಕ್ಕೆ ಅಸೀದ್ ಪಡಂಗಡಿ, ಹ್ಯಾಂಡ್ ಬಾಲ್ ಗೆ ಸುಗನ್, ವಾಲಿಬಾಲ್ ಆಟಕ್ಕೆ ರಾಜೇಶ್, ಬ್ಯಾಡ್ಮಿಂಟನ್ ಆಟಕ್ಕೆ ಸಂಪತ್, ಚೆಸ್ ಆಟಕ್ಕೆ ಸುಪ್ರೀತ್ ತರಬೇತುದಾರರಾಗಿ ಆಗಮಿಸಿದರು.
ಸಹಶಿಕ್ಷಕಿಯರಾದ ಶಾಂತಿ ಪಿರೇರಾ ಸ್ವಾಗತಿಸಿ, ಸುಜಾ ವಂದಿಸಿದರು. ರೆನಿಟಾ ಲಸ್ರಾದೊ ಕಾರ್ಯಕ್ರಮ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಶರತ್ ಪಿಂಟೋ ಸಹಕರಿಸಿದರು.