ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಭೇಟಿ

0

ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಮಾ.31ರಿಂದ ಎ.4ರ ತನಕ ನಡೆಯಲಿದ್ದು, ಎ.1ರಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ಇವರನ್ನು ಗೌರವಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದ್ಯಕ್ಷ ನಿತ್ಯಾನಂದ ಯೋಗಕ್ಷೇಮ ನಾವರ
ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಆರ್ಥಿಕ ಸಮಿತಿ ಸಂಚಾಲಕ ಸದಾನಂದ ನಾವರ, ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here