ನಾವರ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಅಷ್ಟಬಂಧ ಬ್ರಹ್ಮಕಲಶೋತ್ಸವದ 2ನೇ ದಿನದ ಧಾರ್ಮಿಕ ಸಭೆ ಎ.1ರಂದು ನಡೆಯಿತು. ಮಾಣಿಲ ಶ್ರೀ ಧಾಮ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಡ್ಗೆ, ಧರ್ಮಸ್ಥಳ ಜಮಾ ಉಗ್ರಾಣದ ಮುಸ್ಸಜ್ಜಿ ಬಿ. ಭುಜಬಲಿ ಧರ್ಮಸ್ಥಳ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಧಾರ್ಮಿಕ ಪರಿಷತ್ ಮಾಜಿ ಸದಸ್ಯ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿಯ ಹಿರಿಯ ವೈದ್ಯರಾದ ಡಾ.ಎನ್.ಎಂ.ತುಲಪುಳೆ, ಅಳದಂಗಡಿ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದ್ಯಕ್ಷ ನಿತ್ಯಾನಂದ ನಾವರ ಸ್ವಾಗತಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ರವಿರಾಜ ಕೆಲ್ಲ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ನಾವರ, ಸಮಿತಿಯ ಪದಾಧಿಕಾರಿಗಳು ಉಪ ಸಮಿತಿಗಳ ಸಂಚಾಲಕರು, ಸದಸ್ಯರು ಭಕ್ತರು ಉಪಸ್ಥಿತರಿದ್ದರು.ಬ್ರಹ್ಮಕಲಶ ಸಮಿತಿಯ ಉಪಾಧ್ಯಕ್ಷ ಪಿ. ಹೆಚ್. ನಿತ್ಯಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಇದೆ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ಭಕ್ತಿ ಸುಧೀಪ್ ಭಕ್ತಿ ಗೀತೆಯನ್ನು ಸ್ವಾಮೀಜಿಯವರು ಬಿಡುಗಡೆ ಮಾಡಿದರು.ಧಾರ್ಮಿಕ ಸಭೆಯ ಬಳಿಕ ಗೆಜ್ಜೆಗಿರಿ ಮೇಳದವರಿಂದ ಮನ್ಮಥ ಸುಂದರಿ ಯಕ್ಷಗಾನ ಪ್ರದರ್ಶನ ಗೊಂಡಿತು.