ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಭೇಟಿ

0

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಭಾ.ಆ.ಸೇ(ನಿ) ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮತದಾರೊಂದಿಗೆ ಸಂವಾದ ನಡೆಸಿದರು.

ಸೌತಡ್ಕ ಸಭಾ ಭವನದಲ್ಲಿ ತಾಲೂಕಿನ ಸ್ವೀಪ್ ಸಮಿತಿ ವತಿಯಿಂದ ಎಲ್ಲಾ ಶಾಲೆಗಳು, ಅಂಗನವಾಡಿ, ಗ್ರಾ.ಪಂ. ಗ್ರಂಥಾಲಯಗಳಿಗಾಗಿ ಸಿದ್ಧಪಡಿಸಿರುವ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಮತದಾರರ ಸಮಸ್ಯೆಗಳನ್ನು /ಸಂದೇಹಗಳನ್ನು ಆಲಿಸಿ ಮಾತನಾಡಿದ ಅವರು ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದೊಂದಿಗೆ ಮಾತನಾಡುವುದಾಗಿ ತಿಳಿಸಿ ಮತದಾನ ಬಹಿಷ್ಕಾರಿಸುವುದರಿಂದ ಯಾವ ಫಲವೂ ಸಿಗುವುದಿಲ್ಲ ಬದಲಾಗಿ ಮತದಾನದ ಹಕ್ಕು ಚಲಾಯಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತದಾರರು ಪ್ರಯತ್ನಿಸಬೇಕೆಂದು ಮನವೊಲಿಸಿದರು.

ವಿಶೇಷವಾಗಿ EVM ಮಿಷನ್ ನ ಸದೃಢತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ, ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ತಾ.ಸ್ವೀಪ್ ಸಮಿತಿಯ ಅಧ್ಯಕ್ಷರು ವೈಜಣ್ಣ, ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ ರಾವ್, ದ.ಕ ಜಿಲ್ಲಾ ಸ್ವೀಪ್ ಸಮಿತಿಯ ಮಾಸ್ಟರ್ ಟ್ರೈನರ್ ಯೋಗೇಶ ಹೆಚ್.ಆರ್, ತಾ.ಪಂ.ಅಧೀಕ್ಷಕ ಡಿ.ಪ್ರಶಾಂತ್, ಕೊಕ್ಕಡ ಗ್ರಾಮ ಪಂಚಾಯತ್ ಪಿ ಡಿ ಓ ದೀಪಕ್ ಕುಮಾರ್ TLMT ರವಿಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here