ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ರಕ್ಷಿತ್ ಶಿವರಾಂ ರವರಿಗೆ ಗೌರವರ್ಪಣೆ

0

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯುವ ನಾಯಕ ರಕ್ಷಿತ್ ಶಿವರಾಂ ರವರಿಗೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ತಾಲೂಕು ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ, ಚುನಾವಣಾ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ಪಕ್ಷದ ಪ್ರಮುಖರಾದ ಯಶೋಧರ ಚಾರ್ಮಾಡಿ, ಬಾಬು ಎ, ಡಯಾನ ಪುದುವೆಟ್ಟು ಜ್ವಾಲಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here