ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

0

ಪುದುವೆಟ್ಟು: ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.1ರಂದು 2023-24ನೇ ಶೈಕ್ಷಣಿಕ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಒಂದು ಬೇಸಿಗೆ ಶಿಬಿರವನ್ನು ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬರು ತಮ್ಮ ದಿವ್ಯ ಹಸ್ತದಿಂದ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರಕ್ಕೆ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿಕೊಂಡಿದ್ದರು.

ಮೊದಲ ದಿನದ ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಸೆಕೆಂಡರಿ ಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀರಾಮ್ ಸರ್ ಆಗಮಿಸಿದ್ದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್ ಅವರು ನಮ್ಮ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಆಯೋಜನೆ ಮಾಡಿರುವಂಥದ್ದು ತುಂಬಾನೇ ಉತ್ತಮವಾದ ಬೆಳವಣಿಗೆಯಾಗಿದೆ ಇಂತಹ ಬೇಸಿಗೆ ಶಿಬಿರದಲ್ಲಿ ಶಾಲೆಯ ಎಲ್ಲ ಮಕ್ಕಳು ಉತ್ತಮವಾದ ರೀತಿಯಲ್ಲಿ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಇತ್ತೀಚಿನ ದಿನಗಳಲ್ಲಿ ಇಂತಹ ಬೇಸಿಗೆ ಶಿಬಿರ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ, ಬೇಸಿಗೆ ಶಿಬಿರದಲ್ಲಿ ಕಲಿತಂತಹ ವಿಚಾರಗಳನ್ನು ಮುಂದಿನ ದಿನಗಳಲ್ಲಿ ತಾವು ಅಳವಡಿಸಿಕೊಂಡು ಮುಂದುವರಿಯಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ಅವರು ಸ್ವಾಗತಿಸಿ, ಶಿಕ್ಷಕಿಯಾದ ವೇದಾವತಿಯವರು ಧನ್ಯವಾದಗೈದರು, ಶಿಕ್ಷಕಿಯಾದ ಪುಷ್ಪಲತಾ ರವರು ಕಾರ್ಯಕ್ರಮ ನಿರೂಪಿಸಿದರು.

ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿದರು.

ಮೊದಲ ದಿನದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳು ಕಾಗದದಿಂದ ತಯಾರಿಸಬಹುದಾದ ಹಲವಾರು ಮಾದರಿಗಳನ್ನು ಶ್ರೀರಾಮ್ ಅವರಿಂದ ತಿಳಿದುಕೊಂಡರು.

LEAVE A REPLY

Please enter your comment!
Please enter your name here