ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಎ.2ರಂದು ನಡೆಯಿತು.ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮಿಜಿಯವರಿಂದ ಆಶೀರ್ವಚನ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ, ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಶ್ರೀಧರ ಪೂಜಾರಿ, ಉದ್ಯಮಿಗಳಾದ ಶೇಖರ ದೇವಾಡಿಗ ಪಾಲಬೆ, ಬೆಳ್ತಂಗಡಿ ಜೆಸಿಐ ಮುಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ.ಭಾಗವಹಿಸಿದ್ದರು.
ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಧ್ಯಕ್ಷ ನಿತ್ಯಾನಂದ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಹೆಚ್.ಪ್ರಕಾಶ್ ಶೆಟ್ಟಿ ಪ್ರಸ್ತಾವನೆಗೈದರು.
ಪ್ರತೀಕ್ ಪಿ.ಶೆಟ್ಟಿ ನೊಚ್ಚ ಸ್ವಾಗತಿಸಿದರು, ವಿಶ್ವನಾಥ ಶೆಟ್ಟಿ ಸುಲ್ಕೆರಿ ವಂದಿಸಿದರು. ಶ್ರೀಲತಾ ಶೆಟ್ಟಿ ನೊಚ್ಚ ನಿರೂಪಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ತಾಮ್ರದ ಹೊದಿಕೆಗೆ ಮರ ನೀಡಿದ ವಸಂತ ಎಂ. ಕೆ., ಸಹಕರಿಸಿದ ನಾರಾಯಣ ಪೂಜಾರಿ ಪರಾರಿ ಇವರನ್ನು ಸನ್ಮಾನಿಸಲಾಯಿತು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಜೈನ್ ಸಹಕರಿಸಿದರು.
ಸಭಾ ಕಾಋ್ಯಕ್ರಮದ ಬಳಿಕ ಅಭಿನಯ ಕಲಾವಿದರು ಉಡುಪಿ ಇವರಿಂದ ಶಾಂಭವಿ ತುಳು ನಾಟಕ ಪ್ರದರ್ಶನಗೊಂಡಿತು.