Site icon Suddi Belthangady

ಧರ್ಮಸ್ಥಳ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: ಹಲವರಿಗೆ ಗಂಭೀರ ಗಾಯ

ರೆಖ್ಯಾ: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.

ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ.

ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ.ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version