ಕಾಶಿಪಟ್ಣ ಗ್ರಾ.ಪಂ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ

0

ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.

ಇದೇ ಬರುವ ಎ.26ರಂದು ಮತದಾನ ನಡೆಯಲಿದ್ದು, ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು ಹಾಗೂ ಮತದಾರರಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಈ ಕಾರ್ಯಕ್ರಮವನ್ನು ಅರಿವು ಕೇಂದ್ರದ ಮೇಲ್ವಿಚಾರಕರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ಕಾರ್ಯದರ್ಶಿ ಯವರು , ಗ್ರಾಮ ಆಡಳಿತ ಅಧಿಕಾರಿ, ಬಿ ಎಲ್ ಓ, ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here