ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಎ.3ರಂದು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ವಹಿಸಿಕೊಂಡಿದ್ದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯ ನಿವೃತ್ತ ಶಿಕ್ಷಕಿ ವಿಜಯಲಕ್ಷ್ಮಿ ಅವರು ವಹಿಸಿಕೊಂಡಿದ್ದರು.ಅವರು ಮಾತನಾಡಿ ಪ್ರಾಥಮಿಕ ಶಾಲೆಯ ಮಕ್ಕಳು ಮುಗ್ಧ ಮನಸ್ಸಿನ ಮಕ್ಕಳು ಈ ಮಕ್ಕಳಿಗೆ ಒಳ್ಳೆಯ ವಿಷಯವನ್ನು ನಾವು ತಿಳಿಸಿದಾಗ ಮುಂದಿನ ದಿನಗಳಲ್ಲಿ ಆ ಮಕ್ಕಳು ದೇಶಕ್ಕೆ ಉತ್ತಮ ಪ್ರಜೆಯಾಗುತ್ತಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೀನಪ್ಪಗೌಡ ರವರು ಈ ವರ್ಷದ ಬೇಸಿಗೆ ಶಿಬಿರ ಅತ್ಯಂತ ಯಶಸ್ವಿಯಾಗಿ ಮುಗಿದಿದೆ ಶಾಲೆಯ ಎಲ್ಲಾ ಮಕ್ಕಳು ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ, ಬೇಸಿಗೆ ಶಿಬಿರದಲ್ಲಿ ಕಲಿತಂತಹ ವಿಷಯಗಳನ್ನು ಮಕ್ಕಳು ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮೂರನೇ ದಿನದ ಬೇಸಿಗೆ ಶಿಬಿರದಲ್ಲಿ ವಿಜಯಲಕ್ಷ್ಮಿ ಅವರು ಮಕ್ಕಳಿಗೆ ಅಭಿನಯ ಗೀತೆ ಹಾಡುಗಾರಿಕೆಯ ಬಗ್ಗೆ ತರಬೇತಿಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಪವನ್ ಕುಮಾರ್ ರವರು ಸ್ವಾಗತಿಸಿ, ಶೀಲಾ ಯನ್ ರವರು ಧನ್ಯವಾದಗೈದು, ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ರವರು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.