ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಎ.05ರಂದು ವಿದ್ಯಾರ್ಥಿಗಳಿಗೆ ಸಂಶೋಧನಾತ್ಮಕ ವಿಚಾರಗಳ ಮಾಹಿತಿ ಒದಗಿಸುವ ನಿಟ್ಟಿನಲ್ಲಿ “ರಿಸಚ್೯ ಮೆತೊಡೋಲಾಜಿ” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು ಫಿಲೋಮಿನಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪೃಥ್ವಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಂಶೋಧನಾತ್ಮಕ ವಿಧಾನಗಳ ಕುರಿತು ಉಪನ್ಯಾಸ ನೀಡಿ ವಿದ್ಯಾರ್ಥಿಗಳಿಗೆ ಸಂಶೋಧನೆಗಳ ತತ್ವ ಹಾಗೂ ಸಂಶೋಧನೆಗಳ ವಿವಿಧ ಆಯಾಮಗಳ ಕುರಿತು ಸುಧೀರ್ಘವಾಗಿ ಅರಿವು ಮೂಡಿಸಿದರು.
ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ವಿಜಯಾ.ಕೆ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಮತ್ತು ಕಾಲೇಜು ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಅಂತಿಮ ಬಿ.ಕಾಂನ ಭಾರ್ಗವಿ ಸ್ವಾಗತಿಸಿ, ಅಂತಿಮ ಬಿ.ಕಾಂನ ಪೃಥ್ವಿ ಇವರು ವಂದಿಸಿದರು.
ವಿದ್ಯಾಸಂಸ್ಥೆಯ ಸಂಯೋಜಕ ಯಶವಂತ್.ಜಿ.ನಾಯಕ್ ಅವರು ಕಾರ್ಯಾಗಾರವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.