ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

0

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ.4ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು.

ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕ ಹರಿಕೀರ್ತನ್ ವಹಿಸಿದ್ದರು.

ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರಗಳು ಬಹಳ ಸೂಕ್ತವಾಗಿದೆ.ಆದ್ದರಿಂದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಜಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳು ಬೆಂಕಿ ಇಲ್ಲದ ಅಡುಗೆ ತಯಾರಿಯನ್ನು ಮಾಡಿ ಸಂಭ್ರಮಿಸಿದರು.ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು.

ಉಷಾ ನಿರೂಪಿಸಿ, ಕಮಲ್ ತೇಜು ರಜಪೂತ್ ವಂದಿಸಿದರು.

LEAVE A REPLY

Please enter your comment!
Please enter your name here