ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಎ.6ರಂದು ಹಮ್ಮಿಕೊಳ್ಳಲಾಯಿತು.
ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರ ನೇತೃತ್ವದಲ್ಲಿ ಈ ಒಂದು ಸಭೆಯನ್ನು ಆಯೋಜನೆ ಮಾಡಲಾಯಿತು.ಪೋಷಕರ ಸಭೆಯ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ರವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನು ನುಡಿದಂತಹ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿ ಪೋಷಕರು ಮನೆಯಲ್ಲಿ ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು, ರಜೆಯಲ್ಲಿ ಮಕ್ಕಳು ಮನೆಯಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ತಿಳಿಸಿಕೊಟ್ಟರು.
ನಂತರ ಮಾತನಾಡಿದ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಈ ವರ್ಷ ನಮ್ಮ ಶಾಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ.ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ರಜೆಯ ದಿನಗಳಲ್ಲಿ ಅನುಭವಿಸಬೇಕು ಎಂದು ತಿಳಿಸಿಕೊಟ್ಟರು.
ಈ ಒಂದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಆಗಮಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.
ಆಗಮಿಸಿದ ಪೋಷಕ ಬಂಧುಗಳನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.