


ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಇಂದು ಎ.09ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಗಾರವು ಸಿವಿಸಿ ಸಭಾಂಗಣ ಬೆಳ್ತಂಗಡಿಯಲ್ಲಿ ನಡೆಯಿತು.
ಕಾರ್ಯಗಾರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಕಾರ್ಯಗಾರದ ಪ್ರಯೋಜನವನ್ನು ಎಲ್ಲಾ ಬೂತ್ ಅಧ್ಯಕ್ಷರು ಪಡೆಯಬೇಕು
ಬೂತ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರೇ ನಾಯಕರು ಎಂದರು.


ತರಬೇತಿ ಕಾರ್ಯಗಾರವನ್ನು ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಹಮ್ಮದ್ ನವಾಜ್ ಮತ್ತು ಕಾಂಗ್ರೆಸ್ ಪಕ್ಷದ ತಾಂತ್ರಿಕ ನಿರ್ವಾಹಕರಾದ ರವೀಂದ್ರ ನಾಯಕ್ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ, ಪ್ರಚಾರ ಸಮಿತಿಯ ಉಸ್ತುವಾರಿ ಶೇಖರ್ ಕುಕ್ಕೆಡಿ ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್ ನಾಯ್ಕ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರಿಮ್ ಗೇರುಕಟ್ಟೆ, ಗ್ರಾಮೀಣ ಅಧ್ಯಕ್ಷರಾದ ಜೈಸನ್ ಪಟ್ಟೇರಿ, ತಾಲೂಕು ನಗರ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷರಾದ ಒಬಯ್ಯ, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅರಂಬೋಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದಾನ ಬಂಡಾರಿ, ಜಿಲ್ಲಾ ಪಂಚಾಯತ್ ಉಸ್ತುವಾರಿ ಜಯವೀಕ್ರಮ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್, ಬೆಳ್ತಂಗಡಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೀಶ್ ಡಿ ಮತ್ತು ವಿವಿಧ ಸಮಿತಿಯ ನಾಮನಿರ್ದೇಶಿತ ಸದಸ್ಯರು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು, ಗ್ರಾಮ ಸಮಿತಿ, ಬೂತ್ ಸಮಿತಿ ಅಧ್ಯಕ್ಷರು ಬಿ.ಎಲ್.ಎ ರವರು ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.


            






