Site icon Suddi Belthangady

ಅರಸಿನಮಕ್ಕಿ ಸರಕಾರಿ ಪ.ಪೂ ಕಾಲೇಜಿಗೆ ಶೇ.93.33 ಫಲಿತಾಂಶ

ಅರಸಿನಮಕ್ಕಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.93.33 ಫಲಿತಾಂಶ ಲಭಿಸಿದೆ.

ಒಬ್ಬ ವಿದ್ಯಾರ್ಥಿ ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 3 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.66.66 ಫಲಿತಾಂಶ ಲಭಿಸಿದ್ದು, ಇವರಲ್ಲಿ ವಾಣಿಜ್ಯ ವಿಭಾಗದಲ್ಲಿ ರಶ್ಮಿ 545 ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ ಹರ್ಷ 383 ಉತ್ತಮ ಅಂಕಗಳಿಸಿದ್ದಾರೆ.

Exit mobile version