ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

0

ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಅನುಪ್ರಿಯ 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೆಯ ಸ್ಥಾನ, ಆಶ್ರಿತ ಜೈನ್ 592 ಅಂಕಗಳೊಂದಿಗೆ ತಾಲೂಕಿಗೆ ದ್ವಿತೀಯ, ರಾಜ್ಯಕ್ಕೆ ಅಂಕಗಳೊಂದಿಗೆ ಏಳನೆಯ ಸ್ಥಾನ, ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ಕೃತ್ತಿಕಾ ಸಿ ಬಿ ತಲಾ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೆಯ ಸ್ಥಾನ, ತಾಲೂಕಿಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

ವೈಭವ ಕೆ ಎ, ಸಂಜನಾ ಕೆ ಆರ್ ತಲಾ 589 ಅಂಕಗಳೊಂದಿಗೆ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.

ಪರೀಕ್ಷೆ ಬರೆದ 455 ವಿದ್ಯಾರ್ಥಿಗಳ ಪೈಕಿ 359 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 96 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಅಪೂರ್ವ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಎ.10ರಂದು ನಡೆದ ಆತ್ಮೀಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here