ಇಂದಬೆಟ್ಟು ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ

0

ಇಂದಬೆಟ್ಟು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಇಂದಬೆಟ್ಟು ಗ್ರಾಮದ ಬೂತ್ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜನ್ ಜಿ. ಗೌಡ, ಜಿಲ್ಲಾ ಉಸ್ತುವಾರಿಗಳಾದ ನಾರಾಯಣ ಗೌಡ ದೇವಸ್ಯ, ಕಾಂಗ್ರೆಸ್ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷರಾದ ಭರತ್ ಗೌಡ, ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಲಕ್ಷಣ ಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ವೀರಪ್ಪ ಮೊಯ್ಲಿ, ಗ್ರಾಮ ಸಮಿತಿಯ ಅಧ್ಯಕ್ಷ ಜಯರಾಮ್ ಗೌಡ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಧುಕರ ಹಾಗೂ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here