Site icon Suddi Belthangady

ನಾರಾವಿ: ಕಾಂಗ್ರೆಸ್ ಸಭೆ-ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಸಂವಿಧಾನ ಶಿಲ್ಪಿ, ಭಾರತ ರತ್ನ, ಸಮಾನತೆಯ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನಾರಾವಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸಭೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ಕಿಣಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಅರಂಬೋಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂಧಾನ ಬಂಡಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮುನಿರಾಜ್ ಜೈನ್ ಉಸ್ತುವಾರಿಗಳಾದ ರವೀಂದ್ರ ಪೂಜಾರಿ ನಾರವಿ, ಸೂರ್ಯನಾರಾಯಣ ಡಿ.ಕೆ, ದಿವಾಕರ ಬಂಡಾರಿ, ಪಂಚಾಯತ್ ಸದಸ್ಯರು ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

Exit mobile version