ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ದಲ್ಲಿ ಚಿಣ್ಣರ ಬೇಸಿಗೆ ಶಿಬಿರ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ‘ಸೌಖ್ಯವನ’ ಇಲ್ಲಿಯ ಕ್ಷೇಮ ಹಾಲ್‌ನಲ್ಲಿ ಪೂಜ್ಯ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದಗಳೊಂದಿಗೆ, ಎರಡು ದಿವಸಗಳ ಕಾಲ ‘ಚಿಣ್ಣರ ಬೇಸಿಗೆ ಶಿಬಿರ’ವನ್ನು ಆಯೋಜಿಸಲಾಗಿತ್ತು. ಪ್ರಥಮ ದಿನವೇ 103 ಚಿಣ್ಣರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಶಿಬಿರವನ್ನು ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಸೌಖ್ಯ ಯೋಗ ಟ್ರಸ್ಟ್ ಹೆಬ್ರಿ ಇದರ ಅಧ್ಯಕ್ಷರಾದ ಸೀತಾನದಿ ವಿಠಲ ಶೆಟ್ಟಿಯವರು ದೀಪ ಬೇಳಗಿಸುವುದರ ಮೂಲಕ ಉದ್ಘಾಟಿಸಿ ತಮ್ಮ ಶುಭ ನುಡಿಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರದ ಮಹತ್ವ ಮತ್ತು ಅದರ ಉಪಯೋಗಗಳ ಬಗ್ಗೆ ತಿಳಿಸಿದರು.

ಶ್ರೀ ಧರ್ಮಸ್ಥಳ ಜನ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್‌ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಶುಭನುಡಿಗಳಲ್ಲಿ ದುಶ್ಚಟ ಮುಕ್ತ ಸಮಾಜವನ್ನು ನಿರ್ಮಿಸಲು ಚಿಕ್ಕ ವಯಸ್ಸಿನಲ್ಲಿಯೇ ಯಾವ ರೀತಿಯ ಕೊಡುಗೆಯನ್ನು ನೀಡಬಹುದು ಎಂಬುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ|ಗೋಪಾಲ ಪೂಜಾರಿಯವರು ‘ಚಿಣ್ಣರ ಬೇಸಿಗೆ ಶಿಬಿರ’ವನ್ನು ಇನ್ನು ಮುಂದೆ ಪ್ರತೀ ವರ್ಷವೂ ಇಲ್ಲಿ ಆಯೋಜಿಸಲಾಗುವುದಲ್ಲದೆ, ಮಕ್ಕಳಿಗೆ ಪ್ರಕೃತಿ ಚಿಕಿತ್ಸೆಯ ಬಗ್ಗೆ ಅರಿವು ಬರುವ ಹಾಗೆ ಪೋಷಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸುತ್ತಾ ಎಲ್ಲಾ ಮಕ್ಕಳಿಗೂ, ಪೋಷಕರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ನಂತರ ಮಕ್ಕಳಿಗೆ ಯೋಗಾಭ್ಯಾಸ, ಗಾರ್ಡನಿಂಗ್, ನಡಿಗೆ, ಭಾರತೀಯ ನೃತ್ಯಗಳು, ಹಗ್ಗಜಗ್ಗಾಟ ಮುಂತಾದ ಕಾರ್ಯಕ್ರಮವನ್ನು ಆಯೋಜಿಸಿ ಕೊನೆಗೆ ಪೌಷ್ಟಿಕ ಆಹಾರ ನೀಡಲಾಯಿತು. ಆಸ್ಪತ್ರೆಯ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ಗಣ್ಯರನ್ನು ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು.ಡಾ|ನವ್ಯತಾ ಬಲ್ಲಾಳ್‌ರವರು ವಂದನಾರ್ಪಣೆ ಗೈದರು.

ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here