ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮೃತ ಎಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಬೆಳ್ತಂಗಡಿ ತಾಲೂಕಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಗಳಿಸಿರುತ್ತಾರೆ. ಇವರು ಬಂದಾರು ಗ್ರಾಮದ ವಾಸುದೇವ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿ

ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ.ವಾಣಿ ಪದವಿ ಪೂರ್ವ ಕಾಲೇಜು ಶೇಕಡ 98.17 ಅಂಕಗಳನ್ನು ಗಳಿಸಿರುತ್ತದೆ. 190 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿರುತ್ತಾರೆ. 21 ಮಂದಿ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here