ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ, ನೇಮೋತ್ಸವ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ದ ದೇವರ ಗುಡ್ಡೆ ಶ್ರೀ ಗುರುದೇವ ಮಠದ ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ, ಶ್ರೀ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವದ ನೇಮೋತ್ಸವ ಕ್ಷೆತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.19ರಂದು ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪ್ರಾರ್ಥನೆ, ಪುಣ್ಯಾಹ, ವಾಸ್ತು ಪೂಜೆ, ವಾಸ್ತು ಹೋಮ, ದಿಕ್ಪಾಲ ಬಲಿ, ಶ್ರೀ ಸನ್ಯಾಸಿ ಪಂಜುರ್ಲಿ ಸ್ಥಾನದಲ್ಲಿ ವಾಸ್ತು ರಾಕ್ಷಘ್ನ, ಮಧ್ಯಾಹ್ನ ಪ್ರಸನ್ನ ಪೂಜೆ ಮಂತ್ರಾಕ್ಷತೆ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ನೇಮೋತ್ಸವ ಜರಗಿತು.

LEAVE A REPLY

Please enter your comment!
Please enter your name here