ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಏಪ್ರಿಲ್ 20ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.
ಮಹಾ ಪೋಷಕರು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಳಗಳ ಒಕ್ಕೂಟ ಲೋಕೇಶ್ವರಿ ವಿನಯಚಂದ್ರ ಇವರು ಆಗಮಿಸಿ, ಎಲ್ಲರೂ ದೇವರ ಮಕ್ಕಳು ಎಲ್ಲರೂ ಮಾನವೀಯತೆಯಿಂದ ಬದುಕೋಣ ಎಂದು ಮಾತನಾಡಿ, ಪೌಷ್ಟಿಕ ಆಹಾರ ವಿತರಿಸಿದರು.
ಪುಷ್ಪರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಜನರ ಸೇವೆ ಜನಾರ್ಧನ ಸೇವೆ, ಈ ಒಂದು ಸೇವಾ ಕಾರ್ಯದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಮೆಟ್ಟಿನಿಂತು ಸಂಸ್ಥೆಯು ಮುನ್ನಡೆಯುತ್ತಿದೆ ಎಂದು ಪ್ರಾಸ್ತವಿಕ ನುಡಿಯನ್ನು ಆಡಿದರು. ಸಂಯೋಜಕಿ ಕು.ಶ್ರೇಯಾ ಪ್ರಾರ್ಥನೆ ಹಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಿ.ಸ್.ಡಬ್ಲ್ಯೂ ವಿದ್ಯಾರ್ಥಿನಿ ಸುಶ್ಮಿತಾ ಇವರು ಎಲ್ಲರನ್ನೂ ಸ್ವಾಗತಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಬಿ. ಏಸ್.ಡಬ್ಲ್ಯೂ ವಿದ್ಯಾರ್ಥಿನಿ ಕು.ದೀಪ್ತಿ ರವರು ಎಲ್ಲರನ್ನೂ ವಂದಿಸಿದರು.ಕಾರ್ಯಕರ್ತರು ಮಾರ್ಕ್ ಡಿಸೋಜ ರವರು ಕಾರ್ಯಕ್ರಮ ನಿರೂಪಿಸಿದರು.ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾತು.