ಬೆಳ್ತಂಗಡಿ: ಮಂಗಳೂರು ತಲಪಾಡಿ ಕೆ.ಸಿ. ರೋಡ್ ನಿವಾಸಿ ಡಾ.ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಈ ಹಿಂದೆ ಪುತ್ತೂರು ಮತ್ತು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಬಳಿಕ ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.
ಮೃತರ ಅಂತ್ಯಕ್ರಿಯೆ ಎ.21ರಂದು ಬೆಳಿಗ್ಗೆ 5.30ಕ್ಕೆ ಅವರ ಸ್ವಂತ ಊರಾದ ಕಡಬದಲ್ಲಿ ನಡೆಯಲಿದ್ದು ಕಡಬ ಕೇಂದ್ರ ಜುಮಾ ಮಸೀದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.