ಉಜಿರೆ: ಕೆಲ ದಿನಗಳ ಹಿಂದೆ ನಡೆದ ಹುಬ್ಬಳ್ಳಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಉಜಿರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದಂತಹ ಎಬಿವಿಪಿ ಕಾರ್ಯಕರ್ತರ ವಿರುದ್ದ FIR ದಾಖಲಿಸಿದ ಪೋಲೀಸ್ ಇಲಾಖೆಯ ವಿರುದ್ಧ ಎ.22ರಂದು ಬೆಳಾಲ್ ಕ್ರಾಸ್ ನಿಂದ ಮೆರವಣಿಗೆ ನಡೆಸಿ ಉಜಿರೆ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಹತ್ಯೆ ಮಾಡಿದ ಆರೋಪಿ ಫಯಾಜ್ ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಕೊಲೆ, ದರೋಡೆ, ಹಲ್ಲೆಗಳಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ವಿಧ್ಯಾರ್ಥಿಗಳು ಹಾಗೂ ಸಂಘಟನೆಯ ಪ್ರಮುಖರು ಪಾಲ್ಗೊಂಡಿದ್ದರು.
p>