ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ವಾರ್ಷಿಕ ಕ್ರೀಡಾಕೂಟ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಶೈಲೇಶ್ ಕುಮಾರ್ ಡಿ ಎಚ್ ಇವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಸಂಸ್ಕೃತಿಕ ಸಂಘದ ಸಂಚಾಲಕ ಪ್ರೊಫೆಸರ್ ಸುರೇಶ್ ವಿ ಹಾಗೂ ಹಿರಿಯ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜಿನ ಕ್ರೀಡಾ ಸಾಧಕರಾದ ಭರತೇಶ್, ಯಶಸ್, ಮಹಾವೀರ, ತುಷಾರ್, ನಿವೇದಿತಾ, ನವೀನ್ ಮತ್ತಿತರರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ದೀಪ ಇವರು ಎಲ್ಲರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here