ಧರ್ಮಸ್ಥಳದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಅಡಿಗೆ ಬಿದ್ದು ಮಹಿಳೆ ಸಾವು- ಬಸ್ ರಿವರ್ಸ್ ತೆಗೆಯುವಾಗ ಘಟನೆ

0

ಧರ್ಮಸ್ಥಳ: ಇಲ್ಲಿನ ಪೇಟೆಯ ಬಸ್ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್ ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಏಪ್ರಿಲ್ 24ರಂದು ಮಧ್ಯಾಹ್ನ ನಡೆದಿದೆ.

ಬಸ್ ರಿವರ್ಸ್ ತೆಗೆಯುವ ವೇಳೆ ಘಟನೆ ನಡೆದಿದೆ.

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಟಯರ್ ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

LEAVE A REPLY

Please enter your comment!
Please enter your name here