ಓಡಲ ವ್ಯಾಘ್ರ ಚಾಮುಂಡಿ ದೈವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1 ಲಕ್ಷ ಸಹಾಯಧನ ವಿತರಣೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಜಿರೆ ಚಾಮುಂಡಿನಗರ ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1 ಲಕ್ಷದ ಅನುದಾನವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ್ದು ಇದರ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಟ್ರಸ್ಟ್ ಅಧ್ಯಕ್ಷ ಸೀತಾರಾಮ ಶೆಟ್ಟಿ ಯವರಿಗೆ ಅನುದಾನದ ಮಂಜೂರಾತಿ ಪತ್ರವನ್ನು ದೈವಸ್ಥಾನದಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಟೇಸ್ಟಿಗಳಾದ ಶ್ರೀನಿವಾಸ ಗೌಡ ಮಧುರ, ವಿದ್ಯಾ ಕುಮಾರ್, ಸುರೇಶ ಕೂಡಿಗೆ ಮತ್ತು ತಾಲೂಕು ಕೃಷಿ ಅಧಿಕಾರಿ, ವಲಯ ಮೇಲ್ವಿಚಾರಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here