


ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ) ನಿಧನರಾದರು.


ಬುಧವಾರ ಮೇ.01ರಂದು ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮಿಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ.









