ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

0

ಬೆಳ್ತಂಗಡಿ: ಸರ್ಕಾರಿ ಪದವಿ ಕಾಲೇಜಿನಲ್ಲಿ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಾಲಿ ಓ.ಎ. ಇವರು ನೆರವೇರಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ಸಾಮಾನ್ಯವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಇದ್ದು ತಾವುಗಳು ತಮ್ಮ ಬಡತನವನ್ನು ಸವಾಲಾಗಿ ಪಡೆದುಕೊಂಡು ಜೀವನದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕು ಹಾಗೂ ಇಂದಿನ ವಿದ್ಯಾರ್ಥಿಗಳು ಕಾಲೇಜಿನ ಕ್ಯಾಂಪಸ್ ಗಳಲ್ಲಿ ವ್ಯತಿರಿಕ್ತವಾಗಿ ತಿರುಗಾಡುವುದನ್ನು ನಿಲ್ಲಿಸಿ ಸಂಸ್ಕಾರಯುತ ಮೌಲ್ಯಯುತ ಶಿಕ್ಷಣವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಶೈಕ್ಷಣಿಕ ಸಾಲಿನಲ್ಲಿ ಕ್ರೀಡಾಸ್ಪರ್ಧೆಗಳಲ್ಲಿ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಾಗೂ ಶೈಕ್ಷಣಿಕ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಅತಿಥಿಗಳು ಸನ್ಮಾನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು.

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಸುಬ್ರಹ್ಮಣ್ಯಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲ್ ಕಟ್ಟೆ ಇಲ್ಲಿನ ನಿಕಟ ಪೂರ್ವ ಪ್ರಾಂಶುಪಾಲ ಡಾ.ಶರತ್ ಕುಮಾರ್ ಟಿ ಕೆ, ಐಕ್ಯೂ ಎಸಿ ಸಂಚಾಲಕರಾದ ಡಾ.ಕುಶಾಲಪ್ಪ ಎಸ್ ದೈಹಿಕ ಶಿಕ್ಷಣದ ನಿರ್ದೇಶಕ ದೀಪ ಸುವರ್ಣ ಉಪಸ್ಥಿತರಿದ್ದರು.

ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಪ್ರೊಫೆಸರ್ ಸುರೇಶ್ ವಿ ಸ್ವಾಗತಿಸಿ, ಪ್ರಸ್ತಾವನಿಗೈದರು.ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಸೈಯದ್ ಜಾಫರ್ ವಂದಿಸಿದರು.

ವಿದ್ಯಾರ್ಥಿ ಕ್ಷೇಮ ಪಾಲನೆ ವೇದಿಕೆಯ ಪದಾಧಿಕಾರಿಗಳಾದ ಆಶಲತಾ, ಭರತೇಶ್, ವಿನುತಾ, ಶರಣ್ಯ ಮತ್ತು ಅನುಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here