ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಬೈಪಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀರಾಮ ಹೊಸ ಸಂಘದ ಉದ್ಘಾಟನೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೈಪಾಡಿ ಕಾರ್ಯಕರ್ತರಲ್ಲಿ ಶ್ರೀರಾಮ ಪ್ರಗತಿ ಬಂದು ಹೊಸ ಸಂಘವನ್ನು ಒಕ್ಕೂಟದ ಅಧ್ಯಕ್ಷರಾದ ಶಶಿಧರ್ ಮತ್ತು ಉಪಾಧ್ಯಕ್ಷ ದಿನೇಶ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು.

ವಲಯದ ಮೇಲ್ವಿಚಾರಕರಾದ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here