ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

0

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವ ಡಾ.ಶ್ರೀಧರ್ ಎಚ್ ಜಿ ಇವರು ಭಾಗವಹಿಸಿದ್ದರು.

ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿಗಳಲ್ಲಿ ಸಮರ್ಪಣ ಭಾವ ಹೆಚ್ಚಾದಾಗ ಜೀವನದಲ್ಲಿ ಅವರು ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಹಾಗೂ ಇಂದಿನ ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಂಡಾಗ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡು ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಸಂಸ್ಕೃತಿಕ ವಿಭಾಗದ ಸಂಚಾಲಕ ಪ್ರೊ.ಸುರೇಶ್ ವಿ ಸ್ವಾಗತಿಸಿದರು.ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೈಯದ್ ಜಾಫರ್ ವಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ ಎನ್ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ.ಸುಬ್ರಹ್ಮಣ್ಯ ಕೆ, ಐಕ್ಯೂ ಎಸಿ ಸಂಚಾಲಕ ಡಾ.ಕುಶಾಲಪ್ಪ ಎಸ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಆಶಾಲತಾ, ಶರಣ್ಯ, ವಿನುತಾ, ಅನುಷಾ, ಭರತೇಶ್ ಉಪಸ್ಥಿತರಿದ್ದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ಕಳೆದ ಸಾಲಿನಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

LEAVE A REPLY

Please enter your comment!
Please enter your name here