Site icon Suddi Belthangady

ಪಾಲ್ತಾಡಿ ರಾಮಕೃಷ್ಣ ಆಚಾರ್ಯರ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು.

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ನೇತೃತ್ವದಲ್ಲಿ ಉಜಿರೆಯಲ್ಲಿ ನಡೆದ ವಿಶ್ವ ತುಳುಸಮ್ಮೇಳನದಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗಾಗಿ ಶ್ರಮಿಸಿರುತ್ತಾರೆ.

ತುಳು ಸಾಹಿತ್ಯ ಹಾಗೂ ಭಾಷೆಯ ಬೆಳವಣಿಗೆಯಲ್ಲಿ ಇವರ ಪಾತ್ರ ಹಿರಿದಾಗಿದೆ. ತುಳುವಿನಲ್ಲಿ ಅತಿ ಹೆಚ್ಚಿನ ಕೃತಿಗಳನ್ನು ಪ್ರಕಟಿಸಿ ತುಳು ಮಾತೆಯ ಸೇವೆಯನ್ನು ಮಾಡಿರುತ್ತಾರೆ.

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಲ್ಲಿ ಸರಕಾರದ ಗಮನ ಸೆಳೆದಿರುತ್ತಾರೆ. ಅವರ ನಿಧನ ತುಳು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ, ತಾಳ್ಮೆಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Exit mobile version