
ಬೆದ್ರಬೆಟ್ಟು: ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆ ಬರೆದು 38 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇಕಡ 100 ಫಲಿತಾಂಶ ದಾಖಲಿಸಿದೆ.
7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಶಾಲೆಯ ಕೆ.ಮುಖೇಶ್ ಗೌಡ 611 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. 591 ಅಂಕಗಳನ್ನು ಪಡೆದು ಅನ್ವಿತಾ ಕೆ ದ್ವಿತೀಯ ಸ್ಥಾನವನ್ನು, 583 ಅಂಕಗಳನ್ನು ಪಡೆದು ಬಿ.ಎಸ್ ಸೃಜನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.