ಎಸ್ ಎಸ್ ಎಲ್ ಸಿ ಫಲಿತಾಂಶ: ಉಜಿರೆ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಉಜಿರೆ: ಉಜಿರೆ ಶ್ರೀ ಧ.ಮo.ಆಂಗ್ಲ ಮಾಧ್ಯಮ ಪ್ರೌಡಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ 45 ವಿದ್ಯಾರ್ಥಿಗಳು ಹಾಜರಾಗಿದ್ದು, ಉನ್ನತ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು (90% ಅಧಿಕ ಅಂಕ ಪಡೆದುಕೊಂಡಿರುವರು), ಪ್ರಥಮ ಶ್ರೇಣಿಯಲ್ಲಿ 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 15 ವಿದ್ಯಾರ್ಥಿಗಳು, ತೃತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಉತ್ತಮ ಫಲಿತಾಂಶವು ದಾಖಲೆಗೊಂಡಿದೆ.

ಅತುಲ್ ಕೃಷ್ಣ ಎಂಬ ವಿದ್ಯಾರ್ಥಿಯು 619 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನದಲ್ಲಿದ್ದು, ಪಲ್ಲವಿಯು 604, ಮನೀಶ್ ಕಾಮತ್ 603 ಅಂಕಗಳನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here