ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ: ಕು.ಅಭಿಜ್ಞಾ ಎಸ್. ಶೆಟ್ಟಿ ಮತ್ತು ಕು.ನವಮಿ.ಎಂ 615 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ

0

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 77 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.

23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 46 ವಿದ್ಯಾರ್ಥಿಗಳು ಪ್ರಥಮದರ್ಜೆ, 08 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಅಭಿಜ್ಞಾ ಎಸ್. ಶೆಟ್ಟಿ ಮತ್ತು ಕು. ನವಮಿ.ಎಂ 615 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ.ಪಡೆದಿರುತ್ತಾರೆ.

ಮಾ.ಸುಚೇತ್.ಕೆ – 598 ದ್ವಿತೀಯ ಸ್ಥಾನ ಮತ್ತು ಕು.ಸಂಜನ ಪೈ 589 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here