ಕಾಯರ್ತಡ್ಕ: ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಕಾಯರ್ತಡ್ಕ: ಇಲ್ಲಿನ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 28 ವಿದ್ಯಾರ್ಥಿಗಳಲ್ಲಿ ಅನರ್ಘ್ಯ ಜಿ.ಕೆ 591 ಅಂಕಗಳನ್ನು ಪಡೆದು ಪ್ರಥಮ ಸ್ಥಾನ, ಅಕ್ಷ 583 ಅಂಕಗಳೊಂದಿಗೆ ದ್ವೀತಿಯ ಸ್ಥಾನ ಹಾಗೂ ಸಾನ್ವಿ ಪಿ 582 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

10 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶಾಲೆ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.

LEAVE A REPLY

Please enter your comment!
Please enter your name here