ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಬೆಳ್ತಂಗಡಿ: 2023-24 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೌಲ್ಯಮಾಪನದ ಫಲಿತಾಂಶವು ಪ್ರಕಟವಾಗಿದ್ದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 9ನೇ ಬಾರಿಗೆ ಶೇ.100 ಫಲಿತಾಂಶವನ್ನು ಪಡೆದಿರುತ್ತದೆ.

ವಿದ್ಯಾರ್ಥಿನಿ ವಿಯೋನ ರೇಗೊ 607 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಜಾನಿಸ್ ವಿನೀಶಾ ಡಿಸೋಜ 600 ಅಂಕ, ನಿಜಾ ಕುಲಾಲ್ 596 ಅಂಕ ಪಡೆದುಕೊಂಡಿರುತ್ತಾರೆ.

ಪರೀಕ್ಷೆ ಬರೆದ 41 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಶಾಲಾ ನೂತನ ಸಂಚಾಲಕ ಅತೀ ವಂ ಫಾ ವಾಲ್ಟರ್ ಓಸ್ವಲ್ಡ್ ಡಿಮೆಲ್ಲೋ ಹಾಗೂ ಶಾಲಾ ಮುಖ್ಯೋಪಾಧ್ಯಾಯ ವಂ.ಫಾ ಕ್ಲಿಫರ್ಡ್ ಪಿಂಟೋರವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದವನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here