ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇಕಡ 98.24 ಫಲಿತಾಂಶ

0

ಮುಂಡಾಜೆ: 2023- 24 ನೇ ಸಾಲಿನ ಮಾರ್ಚ್/ ಏಪ್ರಿಲ್ ನಲ್ಲಿ ನಡೆದ ಎಸ್.ಎಸ್. ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇಕಡ 98.24 ಫಲಿತಾಂಶ ಬಂದಿರುತ್ತದೆ.

ಪರೀಕ್ಷೆಗೆ ಹಾಜರಾದ ಒಟ್ಟು 57 ವಿದ್ಯಾರ್ಥಿಗಳಲ್ಲಿ 56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಮತ್ತು 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ರಂಜಿತ್ ಎಂಬ ವಿದ್ಯಾರ್ಥಿಯು 609 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿ ಆಗಿರುತ್ತಾನೆ.

LEAVE A REPLY

Please enter your comment!
Please enter your name here