ಪಟ್ಟೂರಿನ ಶ್ರೀರಾಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಪಟ್ರಮೆ: ಕಳೆದ ಮಾರ್ಚ್/ಎಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಟ್ರಮೆ ಗ್ರಾಮದ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕು.ಧನ್ಯ 565 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಏಳು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾ ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಎಲ್ಲಾ ಶಿಕ್ಷಕರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here