ವೇಣೂರು: ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ವೇಣೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಶೇ.100 ಫಲಿತಾಂಶವನ್ನು ದಾಖಲಿಸಿರುತ್ತದೆ.

ಒಟ್ಟು ಫಲಿತಾಂಶದಲ್ಲಿ 12 ಡಿಸ್ಟಿಂಕ್ಷನ್, 22 ಪ್ರಥಮ ಶ್ರೇಣಿ ಹಾಗೂ 1 ದ್ವಿತೀಯ ಶ್ರೇಣಿ ಲಭಿಸಿರುತ್ತದೆ.

ಶಾಲಾ ವಿದ್ಯಾರ್ಥಿನಿ ವಿಯೋಲ ಮೋರಸ್ 97.92% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಹಾಗೂ ಈಶಾನ್ 96.64% ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಹಾಗೂ ವೈಷ್ಣವಿ 95.20% ಅಂಕಗಳನ್ನು ಗಳಿಸಿ ತೃತೀಯ ಸ್ಥಾನವನ್ನು ಪಡೆದು ಶಾಲಾ ಕೀರ್ತಿಯನ್ನು ಬೆಳಗಿಸಿದ್ದಾರೆ.

ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಶಾಲಿನಿ ಡಿಸೋಜಾ, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here